ಕರ್ನಾಟಕ

karnataka

ETV Bharat / state

ನೆರೆ ಹಾವಳಿಗೆ ಕೇಂದ್ರದಿಂದ ₹ 5 ಸಾವಿರ ಕೋಟಿ ಬಿಡುಗಡೆಗೆ ರಾಜ್ಯ ಸರ್ಕಾರ ಒತ್ತಾಯಿಸಲಿ: ಉಗ್ರಪ್ಪ - karnataka floods news

ರಾಜ್ಯದಲ್ಲಿ ಸಂಭವಿಸಿರುವ ನೆರೆ ಹಾವಳಿಗೆ ಕೇಂದ್ರದಿಂದ ₹ 5 ಸಾವಿರ ಕೋಟಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದು ಮಾಜಿ ಸಚಿವ ವಿ.ಎಸ್​.ಉಗ್ರಪ್ಪ ಆಗ್ರಹಿಸಿದ್ದಾರೆ.

ಮಾಜಿ ಸಂಸದ ವಿ.ಎಸ್. ಉಗ್ರಪ್ಪ

By

Published : Aug 13, 2019, 4:44 PM IST

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿ ಹಾಗೂ ಉಂಟಾಗಿರುವ ಹಾನಿ ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ಸಿಎಂ ₹5 ಸಾವಿರ ಕೋಟಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಬೇಕು ಎಂದು ಮಾಜಿ ಸಂಸದ ವಿ.ಎಸ್​.ಉಗ್ರಪ್ಪ ಆಗ್ರಹಿಸಿದ್ದಾರೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸಬೇಕು. ತಕ್ಷಣ ಸಿಎಂ ಸರ್ವಪಕ್ಷ ಸಭೆ ಕರೆದು, ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕು. ಬಿಎಸ್​ವೈ ಒಬ್ಬರೇ ಸುತ್ತಾಡಿದರೆ ಪರಿಹಾರ ಸಿಗದು ಎಂದರು.

ಈ ಹಿಂದೆ 2009ರಲ್ಲಿ ಇಂತಹ ವಿಕೋಪಕ್ಕೆ ಅಂದಿನ ಪ್ರಧಾನಿ ಡಾ. ಮನ್​ಮೋಹನ್ ಸಿಂಗ್ ₹1900 ಕೋಟಿ ನೀಡಿದ್ದರು. ಕೇಂದ್ರ, ರಾಜ್ಯ ಸರ್ಕಾರ ಇನ್ನೂ ನಿದ್ರಾವಸ್ಥೆಯಲ್ಲಿವೆ. ಸುಮಾರು 48 ಜನ ಸಾವನ್ನಪ್ಪಿದ್ದಾರೆ. 12 ಜನ ಕಣ್ಮರೆಯಾಗಿದ್ದಾರೆ. ಸಾವಿರಾರು ಜಾನುವಾರುಗಳು ಸಾವನ್ನಪ್ಪಿವೆ. ಜೊತೆಗೆ ಲೆಕ್ಕವಿಲ್ಲದಷ್ಟು ನಷ್ಟ ಆಗಿದೆ ಎಂದು ಹೇಳಿದರು.

ಅತಿವೃಷ್ಟಿ ಹಾಗೂ ಅನಾವೃಷ್ಟಿ:ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಟಿಯಿದೆ. ಮತ್ತೊಂದು ಕಡೆ ಅನಾವೃಷ್ಟಿಯಿದೆ. ಚಿತ್ರದುರ್ಗ, ಪಾವಗಡ, ತುಮಕೂರು ಸೇರಿ ಕೆಲವೆಡೆ ನೀರಿಲ್ಲ. ಹೀಗಾಗಿ ರಾಜ್ಯದಲ್ಲಿ ಸಾಕಷ್ಟು ಸಂಕಷ್ಟದ ಪರಿಸ್ಥಿತಿ ಉದ್ಭವಿಸಿದೆ. ನಷ್ಟದ ಬಗ್ಗೆ ವರದಿಯನ್ನ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳಿಸಬೇಕು. ರಾಜ್ಯದಲ್ಲಿ ಸರ್ಕಾರ ಬೀಳಿಸಲು ಏನೆಲ್ಲಾ ಸಾಹಸ ಮಾಡಿದರು ಅಂತಾ ಗೊತ್ತೇ ಇದೆ. ಇಂತಹ ಸಂದರ್ಭದಲ್ಲಿ ಮೌನವಾದರೆ ಹೇಗೆ ಎಂದು ಕುಟುಕಿದರು.

ABOUT THE AUTHOR

...view details