ಬೆಂಗಳೂರು:ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರಣ ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮತ್ತು ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು ತೀರ್ಮಾನಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ನಗರ ಆರೋಗ್ಯ ಅಭಿಯಾನದಡಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿದೆ.