ಬೆಂಗಳೂರು: ರಾಜ್ಯದಲ್ಲಿ ಇಂದು 22,673 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 525 ಮಂದಿಗೆ ಸೋಂಕು ದೃಢಪಟ್ಟಿದೆ. 228 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಯಾರೂ ಕೂಡ ಮೃತಪಟ್ಟಿಲ್ಲ.
ಸದ್ಯ ರಾಜ್ಯದಲ್ಲಿ 3,177 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ. 2.31 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.04 ಇದೆ. ವಿಮಾನ ನಿಲ್ದಾಣದಲ್ಲಿ ಶುಕ್ರವಾರ 9,464 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 494 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 209 ಮಂದಿ ಬಿಡುಗಡೆಯಾಗಿದ್ದು, 3061 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ರಾಜಧಾನಿಯಲ್ಲಿ ಕೋವಿಡ್ ಸಾವಿನ ಸಂಖ್ಯೆ 16,964 ಇದೆ.
ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆ/ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.