ಬೆಂಗಳೂರು: ರಾಜ್ಯದಲ್ಲಿ ಇಂದು 14,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 530 ಜನರಿಗೆ ಸೋಂಕು ದೃಢಪಟ್ಟಿದೆ. 637 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಂದಿನ ಕೋವಿಡ್ ಸಾವಿನ ಸಂಖ್ಯೆ ಶೂನ್ಯ.
ಸದ್ಯ 4,928 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ. 3.59, ವಾರದ ಸೋಂಕಿತರ ಪ್ರಮಾಣ ಶೇ. 3.07 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.10 ಇದೆ. ವಿಮಾನ ನಿಲ್ದಾಣದಿಂದ 5,488 ತಪಾಸಣೆಗೆ ಒಳಪಟ್ಟಿದ್ದಾರೆ.