ಬೆಂಗಳೂರು: ರಾಜ್ಯದಲ್ಲಿ ಇಂದು 5,483 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಇದೀಗ 1,24,115ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 5,483 ಸೋಂಕಿತ ಪ್ರಕರಣ: 3 ಸಾವಿರ ಮಂದಿ ಗುಣಮುಖ, 84 ಸಾವು - ಕೋವಿಡ್ ಕೇಸ್
ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಸದ್ಯದ ಮಟ್ಟಿಗೆ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ಒಂದು ವಾರದಿಂದಲೂ 5 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ.
![ರಾಜ್ಯದಲ್ಲಿಂದು 5,483 ಸೋಂಕಿತ ಪ್ರಕರಣ: 3 ಸಾವಿರ ಮಂದಿ ಗುಣಮುಖ, 84 ಸಾವು COVID19 cases](https://etvbharatimages.akamaized.net/etvbharat/prod-images/768-512-8249018-thumbnail-3x2-wdfdf.jpg)
ಸದ್ಯ 49,788 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 72,005 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇಂದು 84 ಜನರು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 2,314 ಆಗಿದೆ. ಇಂದು ವಿವಿಧ ಆಸ್ಪತ್ರೆಗಳಿಂದ 3,130 ಜನರು ಡಿಸ್ಚಾರ್ಜ್ ಆಗಿದ್ದಾರೆ. 609 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿಂದು 2,220, ಬಳ್ಳಾರಿ 340, ಬೆಳಗಾವಿ 217, ಉಡುಪಿ 213, ದಕ್ಷಿಣ ಕನ್ನಡ 204, ಮೈಸೂರು 204 ಧಾರವಾಡ 180, ಶಿವಮೊಗ್ಗ 158, ಕಲಬುರುಗಿ 144, ದಾವಣಗೆರೆ 122, ರಾಯಚೂರಿ 119, ಬೆಂ.ಗ್ರಾಮಾಂತರ 105 ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ದೃಢಪಟ್ಟಿವೆ.