ಕರ್ನಾಟಕ

karnataka

ETV Bharat / state

2 ಗಂಟೆಯೊಳಗೆ 5,672 ಪ್ರಕರಣ ದಾಖಲಿಸಿ 26 ಲಕ್ಷ ರೂ. ದಂಡ ವಿಧಿಸಿದ ಸಂಚಾರಿ ಪೊಲೀಸರು

ಟ್ರಾಫಿಕ್ ನಿಯಮಗಳನ್ನು ಮೀರಿ ಸಂಚಾರ ಮಾಡುತ್ತಿದ್ದ ವಾಹನ ಸವಾರರಿಗೆ ಟ್ರಾಫಿಕ್​ ಪೊಲೀಸರು ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಕೇವಲ ಎರಡು ಗಂಟೆಗಳಲ್ಲಿ ಬರೋಬ್ಬರಿ 26,26,800 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.

5672 cases registered in just 2 hours
ಸಂಗ್ರಹ ಚಿತ್ರ

By

Published : Dec 17, 2020, 10:18 PM IST

ಬೆಂಗಳೂರು: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುವುದಿಲ್ಲ ಎಂದು ಭಾವಿಸಿ ನೀವೇನಾದರೂ ಸಂಚಾರಿ ನಿಯಮಗಳನ್ನ ಗಾಳಿಗೆ ತೂರಿದರೆ ದಂಡ ತಪ್ಪಿದ್ದಲ್ಲ..! ಹೀಗಂತ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಖಡಕ್ ಸಂದೇಶ ರವಾನಿಸಿದ್ದಾರೆ.

ನಗರದಲ್ಲಿ ಕೇವಲ ಎರಡು ಗಂಟೆಗಳಲ್ಲಿ 26,26,800 ರೂಪಾಯಿ ದಂಡ ವಸೂಲಿ ಮಾಡುವ ಮೂಲಕ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ನಗರದ 44 ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ 174 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ 5672 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ 26 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ : 54 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ ಭೂಪ: ಅವನಷ್ಟೇ ಉದ್ದದ ರಸೀದಿ ನೀಡಿದ ಪೊಲೀಸರು!

ವಾಹನ ದಟ್ಟಣೆ ಸಮಯವಲ್ಲದ ವೇಳೆ ದಂಡ ಸಂಗ್ರಹಿಸಿರುವುದು ಮತ್ತೊಂದು ವಿಶೇಷ. ರಾಜಧಾನಿಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತದ ಜೊತೆಗೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹದ್ದೇ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ABOUT THE AUTHOR

...view details