ಬೆಂಗಳೂರು:ರಾಜ್ಯದಲ್ಲಿಂದು 571 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಇಂದು 496 ಮಂದಿ ಗುಣಮುಖರಾಗಿದ್ದು, 6,128 ಸಕ್ರಿಯ ಪ್ರಕರಣಗಳಿವೆ.
ಈವರೆಗೆ ಒಟ್ಟು 9,34,639 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,53,136ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12,350 ಕ್ಕೆ ಏರಿಕೆಯಾಗಿದೆ.