ಬೆಂಗಳೂರು: ನೆರೆಹಾನಿ ಪರಿಹಾರಕ್ಕಾಗಿ 577.84 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ಅಶೋಕ್ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯಕ್ಕೆ ನೆರೆಹಾನಿ ಪರಿಹಾರ ಬಿಡುಗಡೆ: ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಚಿವ ಆರ್.ಅಶೋಕ್ - grant release from central government
ಹಬ್ಬದ ಸಡಗರದಲ್ಲಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ನೆರೆಹಾನಿ ಪರಿಹಾರ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವಣೆಗೆ ಕೇಂದ್ರ ಸರ್ಕಾರ ಇಂದು 577.84 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿ ಬಿಜೆಪಿ ಮುಖಂಡರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾನಿಗೆ ಪ್ರತಿಯಾಗಿ ಕೇಂದ್ರವು ರಾಜ್ಯಕ್ಕೆ 577.84 ಕೋಟಿ ರೂ. ಬಿಡುಗಡೆ ಮಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದೆ. ಈ ಮೊತ್ತ ಬಿಡುಗಡೆಗೆ ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ರಾಜ್ಯದ ಜನತೆ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ.
ನೆರೆಹಾನಿಯಿಂದ 8000 ಕೋಟಿಗೂ ಅಧಿಕ ನಷ್ಟ ಸಂಭವಿಸಿದ್ದು, ಪರಿಹಾರ ನೀಡಿ ನೆರವಾಗುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ವರದಿ ಪಡೆದಿದ್ದ ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ 600 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಹಣ ಬಿಡುಗಡೆ ಮಾಡಿದೆ.