ಬೆಂಗಳೂರು :ದೇಶವನ್ನೇ ತಲ್ಲಣಗೊಳಿಸಿರುವ ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ರಾಜ್ಯದ ನ್ಯಾಯಮೂರ್ತಿಗಳು ಕೂಡ ಕೈಜೋಡಿಸಿದ್ದಾರೆ. ಬರೋಬ್ಬರಿ ₹59 ಲಕ್ಷ ನೆರವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ.
ಕೋವಿಡ್-19 ಪರಿಹಾರ ನಿಧಿಗೆ ₹59 ಲಕ್ಷ ನೀಡಿದ ಉಚ್ಛ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯಗಳು.. - courts contribution to relief founds
ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ನ್ಯಾಯಮೂರ್ತಿ, ನ್ಯಾಯಾಧೀಶರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಕೊರೊನಾ ವಿರುದ್ಧದ ಹೋರಾಟದ ಪರಿಹಾರ ನಿಧಿಗೆ ಬರೋಬ್ಬರಿ ₹59 ಲಕ್ಷ ನೆರವು ನೀಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿಗಳು ಒಟ್ಟು ₹10.75 ಲಕ್ಷವನ್ನು ಸಿಎಂ ಪರಿಹಾರ ನಿಧಿಗೆ ನೀಡಲಾಗಿದೆ. ಅದೇ ರೀತಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಾಂಗ ಅಧಿಕಾರಿಗಳು(ನ್ಯಾಯಾಧೀಶರನ್ನು ಒಳಗೊಂಡು) ತಮ್ಮ ಮೂರು ದಿನದ ಸಂಬಳ 6.06 ಲಕ್ಷ ಹಣವನ್ನು ಪರಿಹಾರ ಕಾರ್ಯಕ್ಕೆ ನೀಡಿದ್ದಾರೆ.
ಇನ್ನೂ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ವರ್ಗ ತಮ್ಮ ಒಂದು ದಿನ ಸಂಬಳ ಅಂದ್ರೆ 42.58 ಲಕ್ಷ ರೂಪಾಯಿಗಳನ್ನು ನಿಧಿಗೆ ಅರ್ಪಿಸಿದ್ದಾರೆ. ಈ ಮೂಲಕ ರಾಜ್ಯದ ನ್ಯಾಯಾಂಗದಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದೆ.