ಬೆಂಗಳೂರು:ಕೊರೊನಾ ಸೋಂಕು ಹೆಚ್ಚು ಕಾಣಿಸಿಕೊಂಡಿರುವ ರಾಜ್ಯದ 9 ಜಿಲ್ಲೆಗಳು ಮಾರ್ಚ್ 31ರ ವರಗೆ ಲಾಕ್ ಡೌನ್ ಹೊರಡಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಬೆಂಗಳೂರು ನಗರ, ಬೆಂ. ಗ್ರಾಮಾಂತರ, ದಕ್ಷಿಣ ಕನ್ನಡ, ಕಲ್ಬುರ್ಗಿ,ಕೊಡಗು,ಚಿಕ್ಕಬಳ್ಳಾಪುರ ಮತ್ತು ಮೈಸೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಜಿಲ್ಲೆಗಳು ಸಂಪೂರ್ಣ ಬಂದ್ ಆಗಲಿವೆ.
ಕೇಂದ್ರ ಸರ್ಕಾರದ ನಿರ್ಧಾರ ಜಾರಿಗೊಳಿಸುವ ಬಗ್ಗೆ ಧವಳಗಿರಿ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ,ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಜತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ.
ಇನ್ನು ವಿಧಾನಸಭಾ ಅಧಿವೇಶನ ನಾಳೆ ಸೋಮವಾರಕ್ಕೆ ಕೊನೆಗೊಳ್ಳುವ ಸಾಧ್ಯತೆ ಇದೆ. ಎಲ್ಲ ಶಾಲಾ ಶಿಕ್ಷಕರಿಗೂ ಮಾರ್ಚ್ 31ರ ವರೆಗೆ ರಜೆ ಘೋಷಣೆ. ಮೆಟ್ರೋ ಸಂಚಾರ ಮಾರ್ಚ್ 31ರ ವರಗೆ ಸ್ಥಗಿತಗೊಂಡಿದೆ.