ಬೆಂಗಳೂರು: ನಿನ್ನೆ ಒಂದೇ ದಿನ ಕಮಾಂಡೋ ಆಸ್ಪತ್ರೆಯಲ್ಲಿ ಆರು ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ 6 ಜನರಿಗೆ ಕೊರೊನಾ
ಕಮಾಂಡೋ ಆಸ್ಪತ್ರೆಯಲ್ಲಿ ನಿನ್ನೆ ಒಂದೇ ದಿನ 6 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 6 ಜನರಲ್ಲಿ 5 ಮಂದಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರಾಗಿದ್ದಾರೆ. ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆಗೆಂದು ಬಂದ ಮಾರತಹಳ್ಳಿ ನಿವಾಸಿಯೋರ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕಮಾಂಡೋ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆಗೆಂದು ಬಂದ ಮಾರತಹಳ್ಳಿ ನಿವಾಸಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅವರನ್ನು ಹಾಗೂ ಅವರ ಕುಟುಂಬದ ಮೂವರನ್ನು ಅಲ್ಲೇ ಐಸೋಲೇಷನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬಸ್ಥರ ರಕ್ತದ ಮಾದರಿಯನ್ನು ಲ್ಯಾಬ್ಗೆ ಕಳುಹಿಸಲಾಗಿದೆ.
ಉಳಿದಂತೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿಬಿಎಂಪಿ ಅಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ. ಕೇಸ್ ನಂಬರ್ P-2650, 2651, 2652, 2654, 2763, 2711ರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಐದು ಮಂದಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರಾಗಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿದ್ದರು. ಸದ್ಯ ಸೋಂಕು ತಗುಲಿದವರನ್ನು ಕಮಾಂಡೋ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.