ಬೆಂಗಳೂರು: ನಗರದಲ್ಲಿಂದು 659 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಬೆಂಗಳೂರಲ್ಲಿ 659 ಕೋವಿಡ್ ಸೋಂಕಿತರು ಪತ್ತೆ: ಸಾವಿನ ಪ್ರಮಾಣದಲ್ಲಿ ಇಳಿಕೆ - ಕೋವಿಡ್ ಇಂದಿನ ವರದಿ
ನಗರದಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದು 659 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಂಗಳೂರು ಕೊರೊನಾ ವರದಿ
ನಗರದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,82,868ಕ್ಕೆ ಏರಿಕೆಯಾಗಿದೆ. 490 ರೋಗಿಗಳು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 3,68,992 ಮಂದಿ ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳಲ್ಲಿ 9,607 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಈವರೆಗೆ 4,268 ಮಂದಿ ಅಸುನೀಗಿದ್ದಾರೆ.