ಬೆಂಗಳೂರು: ರಾಜ್ಯದಲ್ಲಿಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದು, ಹೊಸದಾಗಿ 662 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 9,17,571ಕ್ಕೆ ಏರಿಕೆ ಆಗಿದೆ.
ಇಂದು 4 ಮಂದಿ ಕೋವಿಡ್ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12,074ಕ್ಕೆ ಏರಿಕೆಯಾಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. 1,344 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 8,93,617 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 206 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ 11,861 ಸಕ್ರಿಯ ಪ್ರಕರಣಗಳಿವೆ.