ಬೆಂಗಳೂರು:ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಕಿರಿಯ ವೈದ್ಯರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಸದ್ಯ ಹೊರರೋಗಿ ಚಿಕಿತ್ಸಾ ವಿಭಾಗಗಳಲ್ಲಿ, ತುರ್ತು ಚಿಕಿತ್ಸಾ ವಿಭಾಗಗಳಲ್ಲಿ ತಮ್ಮ ಸೇವೆ ಸ್ಥಗಿತಗೊಳಿಸಿದ್ದಾರೆ.
ಹಿರಿಯ ವೈದ್ಯರು ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದರಿಂದ ಚಿಕಿತ್ಸೆ ಸಿಗುವುದು ವಿಳಂಬವಾಗ್ತಿದೆ. ನಿನ್ನೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿಗೂ ಬಗ್ಗದೇ ಪ್ರತಿಭಟನೆ ಮುಂದುವರೆಸಿರುವ ವೈದ್ಯರು, ಇಂದು ಸಂಜೆ ಕ್ಯಾಂಡಲ್ ಮೆರವಣಿ ನಡೆಸಲು ತೀರ್ಮಾನಿಸಿದ್ದಾರೆ. ಪೊಲೀಸರಿಂದ ಅನುಮತಿ ಸಿಕ್ಕರೆ ಟೌನ್ ಹಾಲ್ ಬಳಿ ಕ್ಯಾಂಡಲ್ ಮೆರವಣಿಗೆ ನಡೆಸಲು ತೀರ್ಮಾನಿಸಿದ್ದಾರೆ.
ಸಂಜೆ ಕ್ಯಾಂಡಲ್ ಮೆರವಣಿಗೆ ನಡೆಸಲು ತೀರ್ಮಾನ ನವೆಂಬರ್ 1ರಂದು ಕರವೇ ಕಾರ್ಯಕರ್ತೆ ಅಶ್ವಿನಿ ಗೌಡ ಮತ್ತು ತಂಡದವರು, ಮಿಂಟೋ ಆಸ್ಪತ್ರೆಯ ಕರ್ತವ್ಯನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ, ಅಶ್ವಿನಿ ಗೌಡರನ್ನು ಬಂಧಿಸುವಂತೆ ಒತ್ತಾಯಿಸಿ ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಡಿಸಿಎಂ ಅಶ್ವತ್ಥ್ ನಾರಾಯಣ್, ಪ್ರತಿಭಟನಾನಿರತ ವೈದ್ಯರನ್ನು ಕರೆಸಿ ಪ್ರತಿಭಟನೆ ಕೈಬಿಡಲು ಎರಡು ಬಾರಿ ಮನವಿ ಮಾಡಿದ್ರೂ ತಮ್ಮ ಪಟ್ಟು ಬಿಡದ ವೈದ್ಯರು ಪ್ರತಿಭಟನೆ ಮುಂದುವರೆಸಿದ್ದಾರೆ.
ನಾಳೆಯಿಂದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.