ಬೆಂಗಳೂರು: ಬಾಂಗ್ಲಾ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ದಿನಕ್ಕೊಂದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದೀಗ ಆರೋಪಿಗಳ ವಿಚಾರಣೆ ವೇಳೆ ಮಹತ್ತರ ಸುಳಿವು ಸಿಕ್ಕಿದ್ದು, ಆರೋಪಿಗಳ ವಶದಲ್ಲಿದ್ದ ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.
ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ, ಅವರ ವಶದಲ್ಲಿದ್ದ ಯುವತಿಯರ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಇನ್ನು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿ ಚನ್ನಸಂದ್ರದ ಕನಕನಗರದ ಮನೆಯೊಂದರಲ್ಲಿ ವಶದಲ್ಲಿರಿಸಲಾಗಿದ್ದ ಬಾಂಗ್ಲಾ ಮೂಲದ 7 ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ..