ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಟಾಪನೆ ಆಗಲಿರುವ ಬೃಹತ್ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆಜಿ ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರು ತಲುಪಿದೆ. ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಸೋಮವಾರ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಪುರೋಹಿತರು ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಸಚಿವರು, ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದೆ. ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ.