ಬೆಂಗಳೂರು:ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು 43,626 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 7,040 ಜನರ ಕೊರೊನಾ ವರದಿ ಪಾಸಿಟಿವ್ ಬಂದಿದೆ. 124 ಜನರು ಕೋವಿಡ್-19 ಮೃತರಾಗಿದ್ದು, ಮರಣ ಪ್ರಮಾಣ ಶೇ. 1.74 ಕ್ಕೆ ಏರಿಕೆಯಾಗಿದೆ. ಈವರೆಗೆ 3,955 ಜನ ಬಲಿಯಾಗಿದ್ದಾರೆ.
ಆಸ್ಪತ್ರೆಯಿಂದ ಇಂದು 6,683 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,41,494 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಈ ಮೂಲಕ ಚೇತರಿಕೆ ಪ್ರಮಾಣ ಶೇ. 62.34 ಕ್ಕೆ ಏರಿದೆ. ರಾಜ್ಯದಲ್ಲಿ 20,37,386 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ.