ಬೆಂಗಳೂರು: ರಾಜ್ಯದಲ್ಲಿಂದು 7,955 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,48,085ಕ್ಕೆ ಏರಿಕೆಯಾಗಿದೆ. ಇಂದು 46 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ 12,813 ಮಂದಿ ಮೃತಪಟ್ಟಿದ್ದಾರೆ.
ಇಂದು 3,220 ಮಂದಿ ಕೋವಿಡ್ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 9,77,169 ಮಂದಿ ಚೇತರಿಸಿಕೊಂಡಿದ್ದಾರೆ. ಇದಲ್ಲದೆ ರಾಜ್ಯದಲ್ಲಿ 58,084 ಸಕ್ರಿಯ ಪ್ರಕರಣಗಳಿವೆ. 378 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.