ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ನಿಮೂರ್ಲನೆಗಾಗಿ ನಗರ ಪೊಲೀಸರು ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದರೆ ಮತ್ತೊಂದೆಡೆ ಡ್ರಗ್ಸ್ ಪೆಡ್ಲರ್ಗಳು ಮಾತ್ರ ಯಾವುದೇ ಅಡ್ಡಿ ಆತಂಕವಿಲ್ಲದೇ ಮಾದಕವಸ್ತು ಮಾರಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಅಕ್ರಮ ಜಾಲದ ಬಗ್ಗೆ ಯಾರಿಗೂ ಅನುಮಾನ ಬಾರದಿರಲು ಡಾರ್ಕ್ ವೆಬ್ಸೈಟ್ನಲ್ಲಿ ಬಿಟ್ಕಾಯಿನ್ ಮುಖಾಂತರ ಡ್ರಗ್ಸ್ ತರಿಸಿ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 8 ಮಂದಿ ದಂಧೆಕೋರರನ್ನ ಸಿಸಿಬಿ ಪೊಲೀಸರು ಹೆಡೆ ಮುರಿಕಟ್ಟಿದ್ದಾರೆ.
ಓದಿ:ಮಂಡ್ಯ: ನೂರಾರು ಕೇಸರಿ ಶಾಲು ತೊಟ್ಟ ವಿದ್ಯಾರ್ಥಿಗಳ ವಿರುದ್ಧ ಮುಸ್ಲಿಂ ವಿದ್ಯಾರ್ಥಿನಿ ಏಕಾಂಗಿ ಹೋರಾಟ!
ಬಂಡೆಪಾಳ್ಯ ಹಾಗೂ ಆರ್ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಎಂಡಿಎಂಎ ಕ್ರಿಸ್ಟೆಲ್ ಹಾಗೂ ಎಲ್ಎಸ್ಡಿ ಬ್ಯಾಟಲ್ ಪೇಪರ್ಗಳನ್ನು ಡಾರ್ಕ್ ವೆಬ್ಸೈಟಿನಲ್ಲಿ ಆರ್ಡರ್ ಮಾಡುತ್ತಿದ್ದರು. ಬಿಟ್ಕಾಯಿನ್ ಮೂಲಕ ಹಣಕಾಸಿನ ವ್ಯವಹಾರ ನಡೆಸಿ ಕಡಿಮೆ ಬೆಲೆಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು. ಬಳಿಕ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಪರಿಚಯಸ್ಥ ಗಿರಾಕಿಗಳಿಗೆ ನಿರಂತರವಾಗಿ ಡ್ರಗ್ಸ್ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು.