ಬೆಂಗಳೂರು: ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆ ಈವರೆಗೆ 15,872 ಪೌರ ಕಾರ್ಮಿಕರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 816 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.
ಕೊರೊನೊ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಈ ಮಾಹಿತಿ ನೀಡಿದ್ದಾರೆ.
ಆ.14ರವರೆಗೆ 11,902 ಮಂದಿಗೆ ಆರ್‍ಎಟಿ ಹಾಗೂ 3,872 ಮಂದಿಗೆ ಆರ್. ಟಿಪಿಸಿಆರ್ ತಪಾಸಣೆಗಳನ್ನು ನಡೆಸಲಾಗಿದ್ದು, ಈ ಪೈಕಿ 816 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ 423 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 341 ಮಂದಿಗೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಆರೈಕೆ ಮಾಡಲಾಗುತ್ತಿದೆ. 52 ಮಂದಿಗೆ ಹೋಮ್ ಐಸೋಲೇಷನ್ ಮಾಡಲಾಗಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಆರ್‍ಎಟಿ ತಪಾಸಣೆಯಲ್ಲಿ ನಗೆಟಿವ್ ಬಂದು ರೋಗ ಲಕ್ಷಣಗಳಿದ್ದರೆ ಹಾಗೂ ಆರ್‍ಟಿಪಿಸಿಆರ್ ತಪಾಸಣೆ ನಡೆಸಿ ವರದಿ ಬರಬೇಕಿರುವ ಸಂದರ್ಭಗಳಲ್ಲಿ ಯಾವ ಪ್ರಕ್ರಿಯೆಗಳನ್ನು ಅನುಸರಿಸುತ್ತೀರಿ ಎಂಬ ಬಗ್ಗೆ ವಿವರಣೆ ನೀಡುವಂತೆ ಬಿಬಿಎಂಪಿಗೆ ಸೂಚಿಸಿದೆ.
ಅಲ್ಲದೇ ಕೊರೊನಾ ಸೋಂಕಿಗೆ ಪ್ರಾಣ ಕಳೆದುಕೊಂಡ ಪೌರ ಕಾರ್ಮಿಕರ ವಿವರಗಳನ್ನು ಒದಗಿಸಬೇಕು. ರಾಜ್ಯದ ಉಳಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕೊರೊನಾ ತಪಾಸಣೆ ನಡೆಸಲಾಗುತ್ತಿದೆಯೇ ಎಂಬುದರ ಕುರಿತು ತಿಳಿಸುವಂತೆ ಸೂಚಿಸಿ