ಬೆಂಗಳೂರು:ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ ಮುಂದುವರೆದಿದ್ದು ಇಂದು ಕೂಡ 8,324 ಜನರಲ್ಲಿ ಸೋಂಕು ದೃಢಪಟ್ಟಿದೆ. ಇತ್ತ 115 ಜನರು ಕೋವಿಡ್ಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 3,27,076 ಕ್ಕೆ ಏರಿಕೆ ಆಗಿದ್ದರೆ, ಇದರಲ್ಲಿ 5483 ಜನರು ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕು ಇದ್ದ 19 ಮಂದಿ ಅನ್ಯಕಾರಣಕ್ಕೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಇನ್ನು 8,110 ಗುಣಮುಖರಾಗಿದ್ದು 2,35,128 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಒಟ್ಟಾರೆ ರಾಜ್ಯದಲ್ಲಿ 86,446 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಇದರಲ್ಲಿ 721 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದ 3,98,584 ಮಂದಿ ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದು ಒಂದೇ ದಿನ 72,684 ಜನರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಇದರಲ್ಲಿ 8,324 ಸೋಂಕು ದೃಢಪಟ್ಟಿದೆ. 27,85,718 ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.