ಬೆಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 27 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೆಯೇ, ಹಿರಿಯ ಸಿವಿಲ್ ನ್ಯಾಯಾಧೀಶ ಹುದ್ದೆಯಿಂದ ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ಪಡೆದಿರುವ 57 ನ್ಯಾಯಾಂಗ ಅಧಿಕಾರಿಗಳಿಗೂ ಹುದ್ದೆ ತೋರಿಸಿ ವರ್ಗಾಯಿಸಲಾಗಿದೆ.
ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಅವರು ಆದೇಶ ಹೊರಡಿಸಿದ್ದು, ವರ್ಗಾವಣೆಗೊಂಡಿರುವ ನ್ಯಾಯಾಧೀಶರು ಡಿ. 28 ರಂದು ತಮ್ಮ ನಿಯೋಜಿತ ಸ್ಥಳಗಳಲ್ಲಿ ಕಾರ್ಯಾರಂಭ ಮಾಡಲಿದ್ದಾರೆ.