ಬೆಂಗಳೂರು: ಇಂದು 8,580 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಂದು 3,284 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿಂದು 8,580 ಸೋಂಕಿತರು ಪತ್ತೆ... ಬೆಂಗಳೂರಿನಲ್ಲಿ 3,284 ಪಾಸಿಟಿವ್ ಕೇಸ್ - ಬೆಂಗಳೂರು ಕೊರೊನಾ ನ್ಯೂಸ್
ಬೆಂಗಳೂರಿನ 31 ಮಂದಿ ಸೇರಿ ರಾಜ್ಯದ ಒಟ್ಟು 133 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಹಾಗೆಯೇ ಬೆಂಗಳೂರಿನಲ್ಲಿ 3,284 ಮಂದಿ ಸೇರಿದಂತೆ ಇಂದು 8,580 ಜನರಲ್ಲಿ ಸೋಂಕು ದೃಢಪಟ್ಟಿದೆ.
ಬೆಂಗಳೂರಿನ 31 ಮಂದಿ ಸೇರಿ ರಾಜ್ಯದ ಒಟ್ಟು 133 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5,091ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 2,630 ಮಂದಿ ಸೇರಿದಂತೆ ಇಂದು ರಾಜ್ಯದಲ್ಲಿ 7,249 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ 2,11,688 ಮಂದಿ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ.
ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 83,608 ಇದ್ದು, ಚಿಕಿತ್ಸೆ ಮುಂದುವರೆದಿದೆ. ರಾಜ್ಯದಲ್ಲಿ ಐಸಿಯುನಲ್ಲಿ 760 ಮಂದಿ ದಾಖಲಾಗಿದ್ದು, ಬೆಂಗಳೂರಿನಲ್ಲೇ 327 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 67,066 ಮಂದಿಯ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 25,80,621 ಮಂದಿಯ ಟೆಸ್ಟ್ ನಡೆಸಲಾಗಿದೆ.