ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ಅಕ್ರಮ ಗಣಿಗಾರಿಕೆಗೆ 9 ಸಾವಿರ ಮರಗಳ ನಾಶ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ - trees destroyed for mining in Kolar

ಗಣಿಗಾರಿಗೆ ನಡೆಸಲು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗುಂಡೇನಹಳ್ಳಿ ಬೆಟ್ಟದಲ್ಲಿ ಸುಮಾರು ಒಂಭತ್ತು ಸಾವಿರ ಮರಗಳನ್ನು ನಾಶ ಮಾಡಲಾಗಿದೆ ಎಂಬುದರ ಕುರಿತು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Highcourt
Highcourt

By

Published : Sep 26, 2020, 3:44 PM IST

Updated : Sep 26, 2020, 4:30 PM IST

ಬೆಂಗಳೂರು:ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇನಹಳ್ಳಿ ಬೆಟ್ಟದಲ್ಲಿದ್ದ 9 ಸಾವಿರಕ್ಕೂ ಅಧಿಕ ಮರಗಳನ್ನು ಅಕ್ರಮ ಗಣಿಗಾರಿಕೆಗಾಗಿ ನಾಶ ಪಡಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಸ್ಥಳೀಯ ನಿವಾಸಿಗಳಾದ ರವೀಂದ್ರ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರಾದ ವೆಂಕಟೇಶ್ ದಳವಾಯಿ ವಾದಿಸಿ, ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಅರಣ್ಯ ಇಲಾಖೆ ಬೆಳೆಸಿದ್ದ 9,500 ಮರಗಳನ್ನು ನಾಶಪಡಿಸಲಾಗಿದೆ. ಅಕ್ರಮ ಗಣಿಗಾರಿಕೆ ಸಂಬಂಧ ಸರ್ಕಾರ 106 ಕೋಟಿ ರೂ. ದಂಡ ವಿಧಿಸಿದ್ದರೂ ಈವರೆಗೆ ಅದನ್ನು ವಸೂಲಿ ಮಾಡಿಲ್ಲ. ಬದಲಿಗೆ ಗಣಿಗಾರಿಕೆ ಪರವಾನಿಗೆಗಳನ್ನು ನವೀಕರಸಿಕೊಡಲಾಗಿದೆ ಎಂದು ವಿವರಿಸಿದರು.

ವಾದ ಪರಿಗಣಿಸಿದ ಪೀಠ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕೋಲಾರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಣ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅ. 14 ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ :

ಕೋಲಾರದ ಮಾಲೂರು ತಾಲೂಕಿನ ಗುಂಡೇನಹಳ್ಳಿ ಬೆಟ್ಟದ 45.16 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆ ಮತ್ತು ಬನಹಳ್ಳಿ ಗ್ರಾಮ ಪಂಚಾಯಿತಿ ಜಂಟಿಯಾಗಿ ಮರಗಳನ್ನು ಬೆಳೆಸಿದ್ದವು. ಈ ಜಾಗದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿರುವ ಕೆಲ ಪ್ರಭಾವಿಗಳು 37 ಎಕರೆ ಪ್ರದೇಶದಲ್ಲಿದ್ದ 9,500 ಕ್ಕೂ ಅಧಿಕ ಮರಗಳನ್ನು ಕಡಿದು ಹಾಕಿದ್ದಾರೆ. ಹಾಗೆಯೇ ಅಕ್ರಮ ಗಣಿಗಾರಿಕೆ ನಡೆಸಿರುವ ಸಂಬಂಧ 106 ಕೋಟಿ ರೂ. ದಂಡ ವಿಧಿಸಲಾಗಿದೆ. ಈ ದಂಡದ ಹಣವನ್ನು ಈವರೆಗೂ ವಸೂಲಿ ಮಾಡಿಲ್ಲ. ಹಾಗೆಯೇ ಇಷ್ಟು ದೊಡ್ಡ ಮೊತ್ತದ ಹಣ ಬಾಕಿ ಇರುವಾಗ ಗಣಿಗಾರಿಕೆ ಗುತ್ತಿಗೆ ಪರವಾನಿಗೆಗಳನ್ನು ನವೀಕರಿಸಲೂ ಬರುವುದಿಲ್ಲ.

ಹಾಗಿದ್ದೂ ಸರ್ಕಾರ ಗುತ್ತಿಗೆ ಅವಧಿ ನವೀಕರಿಸಿರುವುದು ನಿಯಮ ಬಾಹಿರ. ಹೀಗಾಗಿ ದಂಡ ಮೊತ್ತವನ್ನು ವಸೂಲಿ ಮಾಡಲು ಮರಗಳನ್ನು ನಾಶಪಡಿಸಲು ಕಾರಣರಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Last Updated : Sep 26, 2020, 4:30 PM IST

ABOUT THE AUTHOR

...view details