ಬೆಂಗಳೂರು:ಸರ್ಕಾರಿ ಶಾಲಾ ಕಾಲೇಜುಗಳಲ್ಲಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದ ಸರ್ಕಾರ 'ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ'ದ ಮೂಲಕ ಹುಳುಕುಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 'ರಾಜ್ಯದ ಶೇ.64 ರಷ್ಟು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ಸರಿಯಾಗಿಲ್ಲ. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆ ಕಾಣುತ್ತಿಲ್ಲ. ದೆಹಲಿಯಲ್ಲಿ ಶೇ 98ರಷ್ಟು ಫಲಿತಾಂಶವಿದ್ದರೆ, ಕರ್ನಾಟಕದಲ್ಲಿ ಕೇವಲ ಶೇ. 65 ರಷ್ಟು ಫಲಿತಾಂಶ ಬರುತ್ತಿದೆ.
ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ. ಕೆಲವು ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು ಎಲ್ಲ ತರಗತಿಗಳನ್ನು ನೋಡಿಕೊಳ್ಳಬೇಕಾಗಿದೆ. ಕುಡಿವ ನೀರು, ಮೇಲ್ಛಾವಣಿ, ಬೆಂಚು, ಕುರ್ಚಿ ಸೇರಿದಂತೆ ಮೂಲಸೌಕರ್ಯಗಳು ಶೋಚನೀಯ ಸ್ಥಿತಿಯಲ್ಲಿವೆ. ಇವೆಲ್ಲವನ್ನು ಮರೆಮಾಚಲು ಹಿಜಾಬ್ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ದೂರಿದರು.