ಬೆಂಗಳೂರು: ಸಿಎಎ ವಿರೋಧಿಸಿ ಫ್ರೀಡಂ ಪಾರ್ಕ್ನಲ್ಲಿ ನಡೆದಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನ್ಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಅಮೂಲ್ಯ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನ ಡೆಸಿದ ನ್ಯಾಯಾಧೀಶರು, ರಾತ್ರಿ ಜಾಮೀನು ಮಂಜೂರು ಮಾಡಿದೆ.
ಅಮೂಲ್ಯಗೆ ಈಗ 19 ವರ್ಷ ವಯಸ್ಸು. ನಗರದ ಖಾಸಗಿ ಕಾಲೇಜೊಂದರಲ್ಲಿ ಓದುತ್ತಿದ್ದಾರೆ. ಅವರು ಪಾಕ್ ಪರ ಘೋಷಣೆ ಕೂಗಿದ್ದು ನಿಜ. ಆದರೆ, ಪಾಕಿಸ್ತಾನವನ್ನು ನಮ್ಮ ದೇಶ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂಬ ವಾದ ಮಂಡಿಸಿ ಜಾಮೀನು ನೀಡುವಂತೆ ಕೋರಿಕೆ ಸಲ್ಲಿಸಿದ್ದರು. ಅಂತಿಮವಾಗಿ ಅಮೂಲ್ಯಪರ ವಕೀಲರ ವಾದ ಆಲಿಸಿ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ನಗರದ 60ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನ ನ್ಯಾಯಮೂರ್ತಿ ವಿದ್ಯಾಧರ್ ಶಿರಹಟ್ಟಿ ಈ ಅರ್ಜಿಯನ್ನು ತಿರಸ್ಕರಿಸಿದ್ದರು. ಪ್ರಕರಣದ ಬಗ್ಗೆ ತನಿಖೆ ಪೂರ್ಣಗೊಳ್ಳದಿರುವುದು ಹಾಗೂ ಪೊಲೀಸ್ ಅಧಿಕಾರಿಗಳು ಇದುವರೆಗೂ ಚಾರ್ಜ್‌ಶೀಟ್ ಸಲ್ಲಿಸಿಲ್ಲವಾದ್ದರಿಂದ ಜಾಮೀನು ಅರ್ಜಿ ವಜಾಗೊಳಿಸಲಾಗಿತ್ತು. ಇದೀಗ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.