ನೆಲಮಂಗಲ :ಸಹೋದರಿಯ ಮದುವೆ ಮಾಡಲು ಮನೆಗಳ್ಳತನ ಮಾಡುತ್ತಿದ್ದ ಮನೆಗಳ್ಳರನ್ನು ಬಂಧಿಸುವಲ್ಲಿ ದಾಬಸ್ ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದಾಬಸ್ ಪೇಟೆ ಹಳೇ ಸಂತೆ ಬೀದಿಯ ಛಾಯಾಶಂಕರ್ ಎಂಬುವರು ದಿನಾಂಕ 10/12/2020 ರಂದು ಮನೆಗೆ ಬೀಗ ಹಾಕಿ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಮತ್ತು ಹಿಂದೂಪುರದ ತಂಗಿ ಮನೆಗೆ ಹೋಗಿದ್ದರು. ಮನೆಯ ಹಿಂಬಾಗಿಲನ್ನು ಮೀಟಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದರು. ಈ ಮನೆಗಳ್ಳತನ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ವಿದ್ಯಾರಣ್ಯಪುರದಲ್ಲಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.