ಕರ್ನಾಟಕ

karnataka

ETV Bharat / state

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್​​​​​​ಗೆ ಹೈಕೋರ್ಟ್​ನಿಂದ ರಿಲೀಫ್​​​ - Electoral Code

ಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಲ್ಲಡ್ಕ ಪ್ರಭಾಕರ್ ಭಟ್​ ಮೇಲೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನ ಹೈಕೋರ್ಟ್ ರದ್ದು‌ ಮಾಡಿದೆ.

ಹೈಕೋರ್ಟ್

By

Published : Jul 31, 2019, 7:34 PM IST

ಬೆಂಗಳೂರು:ಕಲ್ಲಡ್ಕ ಪ್ರಭಾಕರ್ ಭಟ್​​ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನ ಹೈಕೋರ್ಟ್ ರದ್ದು‌ ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ರದ್ಧತಿ ಕೋರಿ ಕಲ್ಲಡ್ಕ ಪ್ರಭಾಕರ್ ಭಟ್​ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್ ಕುಮಾರ್‌, ಅರ್ಜಿದಾರರನ್ನು ಆರೋಪಮುಕ್ತಗೊಳಿಸಿ ತೀರ್ಪು ನೀಡಿದರು.

ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದ ಮಾಡಿ, ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ವಿನಾ ಕಾರಣ ಆರೋಪ ಮಾಡಲಾಗಿದೆ. ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಪ್ರಭಾಕರ್ ಭಟ್ ಅವರ ಹೇಳಿಕೆಯಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ನ್ಯಾಯಲಯಕ್ಕೆ ಮನವರಿಕೆ ಮಾಡಿದರು.

ಕಳೆದ ಚುನಾವಣೆ ವೇಳೆ ನೀತಿ ಸಂಹಿತೆ ಆರೋಪದ ಮೇಲೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ದೋಷಾರೋಪ ಪಟ್ಟಿಯನ್ನ ಸಲ್ಲಿಕೆ ಮಾಡಿದ್ರು. ಇದನ್ನ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ್ ಭಟ್​ ಅವರು ಹೈಕೋರ್ಟ್ ಮೆಟ್ಟಿಲೇರಿದ್ರು.

ABOUT THE AUTHOR

...view details