ಕರ್ನಾಟಕ

karnataka

ETV Bharat / state

ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಶರಣಾದ ದಂಪತಿ

ದಂಪತಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಶರಣಾದ ದಂಪತಿ
ಆತ್ಮಹತ್ಯೆಗೆ ಶರಣಾದ ದಂಪತಿ

By

Published : Apr 7, 2023, 6:50 AM IST

ಬೆಂಗಳೂರು:ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ - ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ನಡೆದಿದೆ. ತುಮಕೂರು ಮೂಲದ ಜಗದೀಶ್(37), ನಂದಿನಿ (40) ಆತ್ಮಹತ್ಯೆಗೆ ಶರಣಾದ ದಂಪತಿ. ಗುರುವಾರವಾರ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದಂಪತಿ ಮೂಲತಃ ತುಮಕೂರಿನವರಾಗಿದ್ದು ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಪೀಣ್ಯದ ಚೊಕ್ಕಸಂದ್ರದ ಮನೆಯೊಂದರಲ್ಲಿ ವಾಸವಾಗಿದ್ದರು. ಜಗದೀಶ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ನಂದಿನಿ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂದ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದಾವಣಗೆರೆ: ರಾತ್ರಿ ಮನೆ ಮುಂದೆ‌ ಮಲಗಿದ್ದ ವೃದ್ದನ ಹತ್ಯೆ

ಮಲಗಿದ್ದ ವೃದ್ಧನ ಹತ್ಯೆ - ದಾವಣಗೆರೆ :ಮನೆಯ ಮುಂದೆ ನಿದ್ರಿಸುತ್ತಿದ್ದ ವೃದ್ದನ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ಗುರುವಾರ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದಲ್ಲಿ ನಡೆದಿದೆ. ಚಂದ್ರಣ್ಣ(65) ವೃದ್ದ ಕೊಲೆಯಾದ ವ್ಯಕ್ತಿ. ಚಂದ್ರಣ ಗ್ರಾಮ‌‌ದೇವತೆಯ ಹಬ್ಬ ಮುಗಿಸಿಕೊಂಡು ಬಂದು ಮನೆ ಮುಂದೆ ಮಲಗಿದ್ದರು. ಈ ವೇಳೆ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ನಸುಕಿನ ಸಮಯದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ದೇವನಹಳ್ಳಿ: ಸ್ನಾನಗೃಹದ ಗೋಡೆ ಕುಸಿದು ಮಹಿಳೆ ಸಾವು

ಸ್ನಾನಗೃಹ ಗೋಡೆ ಕುಸಿದು ಮಹಿಳೆ ಸಾವು- ದೇವನಹಳ್ಳಿ (ಬೆಂ.ಗ್ರಾ): ಸ್ನಾನ ಮುಗಿಸಿಕೊಂಡು ಹೊರ ಬರುತ್ತಿದ್ದ ವೇಳೆ ಸ್ನಾನಗೃಹ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ದೇವನಾಯಕನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಸಾವಿತ್ರಮ್ಮ (50) ಮೃತ ದುರ್ದೈವಿ.

ಮೃತ ಸಾವಿತ್ರಮ್ಮ ಶೆಡ್​ ರೀತಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಮನೆಯಲ್ಲೇ ಸ್ನಾನದ ಕೋಣೆಯಿದ್ದು, ಎಂದಿನಂತೆ ಸ್ನಾನ ಮುಗಿಸಿ ಹೊರ ಬರುವ ವೇಳೆ ಅವರ ಮೇಲೆ ಗೋಡೆ ಕುಸಿದು ಬಿದ್ದಿದೆ. ಇದನ್ನು ಗಮನಿಸಿದ ನೆರೆಹೊರಯವ ನಿವಾಸಿಗಳು ಕೂಡಲೇ ಗೋಡೆ ಕೆಳಗೆ ಸಿಲುಕ್ಕಿದ್ದ ಸಾವಿತ್ರಮ್ಮರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸಾವಿತ್ರಮ್ಮರಿಗೆ ನಾಲ್ವರು ಮಕ್ಕಳು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ಕೊಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಕರಗ: ಭಾರಿ ಪ್ರಮಾಣದಲ್ಲಿ ಕರ್ಪೂರ ಹಚ್ಚಿದ ಭಕ್ತರು, 20ಕ್ಕೂ ಹೆಚ್ಚು ವಾಹನಗಳಿಗೆ ಹಾನಿ

ABOUT THE AUTHOR

...view details