ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು, ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಭೇಟಿ ನೀಡಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಉಪ ಸಭಾಪತಿ ಪ್ರಾಣೇಶ್, ಶಾಸಕರಾದ ಎಂ.ಪಿ ಕುಮಾರಸ್ವಾಮಿ, ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರಿದ್ದ ನಿಯೋಗ ಮುಖ್ಯಮಂತ್ರಿಗಳ ಜೊತೆ ಕೆಲ ಕಾಲ ಮಾತುಕತೆ ನಡೆಸಿತು.