ಬೆಂಗಳೂರು: ಪೇಜಾವರ ಶ್ರೀ ಹಾಗೂ ಹಿಂದೂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದವರ ವಿರುದ್ಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.
ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್: ಪೊಲೀಸ್ ಆಯುಕ್ತರಿಗೆ ದೂರು - A derogatory comment against Pajavar Shree Compliant to Commisioner
ಪೇಜಾವರ ಶ್ರೀ ಹಾಗೂ ಹಿಂದೂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದವರ ವಿರುದ್ಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

ಪೇಜಾವರ ಶ್ರೀಗಳ ವಿರುದ್ದ ಅವಹೇಳನಕಾರಿ ಕಮೆಂಟ್
ಬ್ರಾಹ್ಮಣ ಮಹಾಸಭಾದಿಂದ ಪೊಲೀಸ್ ಆಯುಕ್ತರಿಗೆ ದೂರು
ಈ ಬಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರು ಮಾಹಿತಿ ನೀಡಿ, ಪೇಜಾವರ ಶ್ರೀಗಳು ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಹಿನ್ನೆಲೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಬೇಗ ಗುಣ ಮುಖರಾಗಲೆಂದು ಪೋಸ್ಟ್ ಹಾಕಿದ್ದರು.
ಇದಕ್ಕೆ ಕೆಲ ವ್ಯಕ್ತಿಗಳು ಅವಳಹೇಳನಕಾರಿಯಾಗಿ ಕಮೆಂಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇವೆ. ಆಯುಕ್ತರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದಾರೆ ಎಂದರು.