ಕರ್ನಾಟಕ

karnataka

ETV Bharat / state

ಸಚಿವ ಸಂಪುಟ ಬಗ್ಗೆ ಹೈಕಮಾಂಡ್​ ಜೊತೆ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಯಡಿಯೂರಪ್ಪ - ಸಿಎಂ ಯಡಿಯೂರಪ್ಪ ಹೇಳಿಕೆ

ಇಂದು ಕರ್ನಾಟಕ ಭವನಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ಇಂದು ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.

CM Yeddyurappa
ಸಿಎಂ ಯಡಿಯೂರಪ್ಪ

By

Published : Jan 30, 2020, 4:43 PM IST

ನವದೆಹಲಿ/ಬೆಂಗಳೂರು: ಇಂದು ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಅವರೊಂದಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದರು.

ಸಿಎಂ ಯಡಿಯೂರಪ್ಪ

ಇಂದು ಕರ್ನಾಟಕ ಭವನಕ್ಕೆ ಸಿಎಂ ಆಗಮಿಸಿದ್ದ ಅವರು ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ, ಹೈಕಮಾಂಡ್​​ ತೆಗೆದುಕೊಂಡ ತೀರ್ಮಾನದ ಪ್ರಕಾರ ಸಚಿವ ಸಂಪುಟ ವಿಸ್ತರಿಸಲಾಗುವುದು ಮಾಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಇನ್ನು ನಮ್ಮ ರಾಜ್ಯ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ABOUT THE AUTHOR

...view details