ಕರ್ನಾಟಕ

karnataka

ETV Bharat / state

ಕೋವಿಡ್ ವಿರುದ್ಧ ಗೆದ್ದು ಬಂದ ಹೆಚ್.ಎಸ್.ದೊರೆಸ್ವಾಮಿ - ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇವರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ

By

Published : May 12, 2021, 5:04 PM IST

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

104 ವರ್ಷ ವಯಸ್ಸಿನ ದೊರೆಸ್ವಾಮಿಯವರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೋವಿಡ್ ಮುಕ್ತರಾಗಿ ಮನೆಗೆ ತೆರಳಿದ್ದಾರೆ.

ಕೋವಿಡ್ ಗೆದ್ದು ಬಂದಿರುವ ಈ ಹಿರಿಯ ಜೀವ ಇತರೆ ರೋಗಿಗಳಿಗೆ ಧೈರ್ಯ ತುಂಬುವಂತಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ವೈದ್ಯರು ಮತ್ತು ಸಿಬ್ಬಂದಿ ಬಹಳ ಕಾಳಜಿಯಿಂದ ಅವರನ್ನು ನೋಡಿಕೊಂಡು ಕೋವಿಡ್​ ವಿರುದ್ಧ ಗೆಲುವಿಗೆ ಸಹಕರಿಸಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

For All Latest Updates

ABOUT THE AUTHOR

...view details