ಬೆಂಗಳೂರು: ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನುಂಟು ಮಾಡುತ್ತಿರುವ ಸಿಲಿಕಾನ್ ಸಿಟಿಯ ದೇಗುಲಗಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ. ಈಗ ಬಸವನಗುಡಿ ಪೊಲೀಸ್ ಠಾಣೆಯಿಂದ ದೊಡ್ಡ ಗಣಪತಿ ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ.
ರಾಜಧಾನಿಯ ಸುಪ್ರಸಿದ್ದ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಿಗದಿತ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಉಂಟು ಮಾಡಲಾಗುತ್ತಿದೆ ಎಂದು ನೋಟಿಸ್ ನೀಡಲಾಗಿದೆ. ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.