ಬೆಂಗಳೂರು:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಭಾರತ-ನ್ಯೂಜಿಲ್ಯಾಂಡ್ ಪಂದ್ಯದ ವೇಳೆ ಬೆಟ್ಟಿಂಗ್, ಆರೋಪಿ ಅರೆಸ್ಟ್ - A man arrested for Cricket betting,
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಅಸಾಮಿಯನ್ನು ಬಂಧಿಸುವಲ್ಲಿ ಕೇಂದ್ರ ವಿಭಾಗದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಕೇಶ್ ಜೈನ್ ಬಂಧಿತ ಆರೋಪಿ. ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ವಿ.ಕೆ ಅಯ್ಯಂಗಾರ್ ರಸ್ತೆಯ ಬಳಿ ಇರುವ ರಾಘವೇಂದ್ರ ಹೋಟೆಲ್ ಮುಂಭಾಗ ಆರೋಪಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ. ನಿನ್ನೆ ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಪಂದ್ಯದ ಗೆಲುವು ಮತ್ತು ಸೋಲಿನ ಬಗ್ಗೆ ಮೊಬೈಲ್ನಲ್ಲಿ ಸಾರ್ವಜನಿಕರಿಂದ ಕ್ರಿಕೆಟ್ ಬೆಟ್ಟಿಂಗ್ ಗಾಗಿ ಹಣ ಕಟ್ಟಿಸಿಕೊಂಡು ಕಾನೂನುಬಾಹಿರವಾಗಿ ಆಟವಾಡುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿ ಬಳಿಯಿದ್ದ ನಗದು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ ಕೆಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.