ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಬಾಣಸವಾಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ - ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ
ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುವುದರಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು, 10 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿ
ರಾಮನಗರ ಮೂಲದ ರಿಯಾಜ್ ಬಂಧಿತ ಆರೋಪಿ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರುತ್ತಿರುವುದನ್ನು ಗಮನಿಸಿದ ಬಾಣಸವಾಡಿ ಪೊಲೀಸರು, ಈತನನ್ನು ಸೆರೆ ಹಿಡಿದಿದ್ದು, 2 ಲಕ್ಷ, 75 ಸಾವಿರ ರೂ. ಮೌಲ್ಯದ 10 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.