ಬೆಂಗಳೂರು: ಪೆಟ್ರೋಲ್ ಬಂಕ್‌ಗಳಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಖಿಲ್ ಜಾರ್ಜ್(28) ಬಂಧಿತ ಆರೋಪಿಯಾಗಿದ್ದು, ಈತನಿಂದ 22,500 ರೂ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಎಂಬುದಾಗಿ ವಿಚಾರಣೆಯಿಂದ ತಿಳಿದು ಬಂದಿದೆ.
ನ.1ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಲಾಲ್‌ಬಾಗ್ ಮುಖ್ಯ ರಸ್ತೆಯಲ್ಲಿರುವ ಎಸ್.ಎಂ.ಕಣ್ಣಪ್ಪ ಆಟೋ ಮೊಬೈಲ್ಸ್ ಎಂಬ ಪೆಟ್ರೋಲ್ ಬಂಕ್‌ಗೆ ಬಂದಿದ್ದ ಆರೋಪಿ 900ರೂ ಪೆಟ್ರೋಲ್ ಹಾಕಿಸಿಕೊಂಡಿದ್ದ. ಬಳಿಕ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ 500 ರೂ. ಒಂದು ನೋಟು ಹಾಗೂ 100 ರೂ. ನಾಲ್ಕು ನೋಟುಗಳನ್ನು ನೀಡಿದ್ದ.