ಬೆಂಗಳೂರಿನಲ್ಲಿ ಉತ್ತರ ಭಾರತ ಮೂಲದ ವ್ಯಕ್ತಿಯ ಶವ ಪತ್ತೆ ಬೆಂಗಳೂರು : ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದು ಶವ ಎಸೆದು ಹೋಗಿರುವ ಘಟನೆ ಆರ್.ಎಂ.ಸಿ ಯಾರ್ಡ್ ಸಮೀಪದ ಸೋಮೇಶ್ವರ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು 40 ವರ್ಷದ ಉತ್ತರ ಭಾರತ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿಯು ಆರ್.ಎಂ.ಸಿ ಯಾರ್ಡ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಪರಿಚಯಸ್ಥ ಉತ್ತರ ಭಾರತ ಮೂಲದ ಕೆಲ ವ್ಯಕ್ತಿಗಳೊಂದಿಗೆ ಆಗಾಗ ಗಲಾಟೆಯಾಗುತ್ತಿತ್ತು. ತಡರಾತ್ರಿ ಕೂಡ ಗಲಾಟೆ ನಡೆದಿದ್ದು, ಈ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕತ್ತು ಕುಯ್ದು ಕೊಲೆ ಮಾಡಲಾಗಿದೆ. ಬಳಿಕ ಶವ ಎಸೆದು ಆರೋಪಿಗಳು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ, ಪ್ರಕರಣ ದಾಖಲು : ಇನ್ನೊಂದೆಡೆ, ಮಹಿಳೆಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ತಡರಾತ್ರಿ ಸುಬ್ರಹ್ಮಣ್ಯನಗರ ಠಾಣಾ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ನಡೆದಿದೆ. ರಾಕೇಶ್ ಎಂಬಾತನ ಮೇಲಿನ ವೈಷಮ್ಯದಿಂದ ಆತನ ಮನೆಯಲ್ಲಿ ಬಾಡಿಗೆಗೆ ಇದ್ದ ಮಹಿಳೆ ಮೇಲೆ ಅಭಿ ಗೌಡ ಎಂಬಾತ ಹಲ್ಲೆ ಮಾಡಿದ್ದಾನೆ.
ಇದನ್ನೂ ಓದಿ :ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ : ಸ್ಥಳೀಯರ ಮೊಬೈಲ್ನಲ್ಲಿ ದೃಶ್ಯ ಸೆರೆ.. WATCH VIDEO
ಗಾಯತ್ರಿ ನಗರದಲ್ಲಿ ಗಣೇಶನ ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಗೌಡ ಮತ್ತು ರಾಕೇಶನ ನಡುವೆ ಕೆಲ ದಿನಗಳಿಂದ ವೈಷಮ್ಯವಿತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ರಾಕೇಶ್ ಮನೆಗೆ ನುಗ್ಗಿ ಹಲ್ಲೆ ಮಾಡಲು ಸಂಚು ಮಾಡಿದ್ದ ಅಭಿ ಗೌಡ, ತಡರಾತ್ರಿ ಆತನ ಮನೆ ಬಳಿ ಬಂದಿದ್ದ. ಆದರೆ, ರಾಕೇಶ್ ಮನೆ ಬದಲು ಆತನ ಪಕ್ಕದ ಮನೆಯ ಬಾಗಿಲು ಬಡಿದಿದ್ದ ಆರೋಪಿಯು, ಮನೆಯಲ್ಲಿದ್ದ ಮಹಿಳೆ ಬಾಗಿಲು ತೆರೆಯುತ್ತಿದ್ದಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ಮಹಿಳೆಯ ಕೈಗೆ ಗಾಯವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಕೊಪ್ಪಳದಲ್ಲಿ ಕರ್ತವ್ಯ ನಿರತ ಪಿಡಿಒ ಮೇಲೆ ಹಲ್ಲೆ.. ಪ್ರಕರಣ ದಾಖಲು
ಇದೇ ತಿಂಗಳ ಅಕ್ಟೋಬರ್ 14 ರಂದು ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿತ್ತು. ಮೃತಳನ್ನು ಪದ್ಮಾಕ್ಷಿ (40) ಎಂದು ಗುರುತಿಸಲಾಗಿತ್ತು. ಕಿರಗುಂದ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ-ಪದ್ಮಾಕ್ಷಿ ದಂಪತಿ ಮಧ್ಯೆ ಆಗಾಗ್ಗೆ ಕುಡಿತ ಚಟ ಮತ್ತು ಅನೈತಿಕ ಸಂಬಂಧದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಅನೈತಿಕ ಸಂಬಂಧದ ಶಂಕೆ : ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ, ಮಹಿಳೆ ಸಾವು