ದೊಡ್ಡಬಳ್ಳಾಪುರ: ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ 70 ವರ್ಷದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ ಮೃತ ವೃದ್ಧ.
ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧನಿಗೆ ಹೃದಯಾಘಾತ: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಜನಸ್ಪಂದನ ಸಮಾವೇಶದಲ್ಲಿ ಇವರು ಭಾಗವಹಿಸಿದ್ದರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಇವರಿಗೆ ಹೃದಯಾಘಾತವಾಗಿತ್ತು ತಕ್ಷಣವೇ ಅವರನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.