ಕರ್ನಾಟಕ

karnataka

ETV Bharat / state

ಬಿಬಿಎಂಪಿ ಕಸದ ಲಾರಿಗೆ ಡಿಕ್ಕಿ: ನವವಿವಾಹಿತ ಸಾವು - ಬೆಂಗಳೂರು ಅಪಘಾತ

ಬಿಬಿಎಂಪಿ ಕಸದ ಲಾರಿಗೆ ಡಿಕ್ಕಿ ಹೊಡೆದು ನವ ವಿವಾಹಿತ ಮೃತಪಟ್ಟ ಘಟನೆ ಜಯನಗರ ಮೆಟ್ರೋ ನಿಲ್ದಾಣದ ಬಳಿ ಕಳೆದ ರಾತ್ರಿ ನಡೆದಿದೆ.

Etv Bharat
ಬಿಬಿಎಂಪಿ ಕಸದ ಲಾರಿಗೆ ಡಿಕ್ಕಿ

By ETV Bharat Karnataka Team

Published : Sep 25, 2023, 10:57 AM IST

Updated : Sep 25, 2023, 12:27 PM IST

ಬೆಂಗಳೂರು:ಬಿಬಿಎಂಪಿ ಕಸದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನದಲ್ಲಿ ಡಿಕ್ಕಿ ಹೊಡೆದು ನವ ವಿವಾಹಿತ ಬಲಿಯಾದ ಘಟನೆ ತಡರಾತ್ರಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ನಡೆಯಿತು. ದ್ವಿಚಕ್ರ ವಾಹನ ಸವಾರ ಯಶವಂತ್ (26) ಮೃತರು. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ.

ನಿಲುಗಡೆಗೆ ಅನುಮತಿ ಇರದಿದ್ದರೂ ಮೆಟ್ರೋ ನಿಲ್ದಾಣದ ಕೆಳಭಾಗದಲ್ಲಿ ಬಿಬಿಎಂಪಿ ಕಸದ ಲಾರಿ ನಿಲ್ಲಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಬನಶಂಕರಿಯಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯಶವಂತ್, ಲಾರಿಯ ಹಿಂಬದಿಗೆ ಗುದ್ದಿದ್ದಾರೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಲಾರಿಯ ಕೆಳಭಾಗದಲ್ಲಿ ಸಿಕ್ಕಿಹಾಕಿಕೊಂಡು ಯಶವಂತ್ ಸಾವನ್ನಪ್ಪಿದ್ದಾರೆ. ಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ತವ್ಯದಲ್ಲಿದ್ದ ಚಾಲಕ ಅಸ್ವಸ್ಥ: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿಎಂಟಿಸಿ ಬಸ್ ಪಲ್ಟಿ, ಹಲವರಿಗೆ ಗಾಯ

ದಕ್ಷಿಣ ಕನ್ನಡದಲ್ಲಿ ಸ್ಕೂಟರ್​ನಿಂದ ಬಿದ್ದು ಮಹಿಳೆ ಸಾವು:ಉಳ್ಳಾಲದರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್​ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ ಕಾಸರಗೋಡು ಮೂಲದ ನಿವಾಸಿ ಮೃತಪಟ್ಟಿದ್ದಾರೆ. ಸುಮಾ ನಾರಾಯಣ ಗಟ್ಟಿ ( 52) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್​​ನಲ್ಲಿ ತೊಕ್ಕೊಟ್ಟು ಜಂಕ್ಷನ್​​ಗೆ ತೆರಳುವಾಗ ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ಭೇಟಿ ನೀಡಿ ವಾಪಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ‌.

ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ‌ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್​​ನಿಂದ ಸುಮಾ ಉರುಳಿ ಬಿದ್ದಿದ್ದಾರೆ. ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರಲ್ಲಿ ಅಪಘಾತ:ನಗರದ ಆರ್‌.ಎಮ್.ಸಿ.ಯಾರ್ಡ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಎಡರು ದಿನಗಳ ಹಿಂದೆ ನಡೆದಿತ್ತು. ಮನಮೋಹನ್ (31) ಹಾಗೂ ನಿಖಿಲ್ (25) ಮೃತರು. ಸ್ನೇಹಿತರೊಂದಿಗೆ ಸಂತೋಷಕೂಟ ಮುಗಿಸಿ ನಸುಕಿನ 3:30ರ ಸಮಯದಲ್ಲಿ ಬಿಎಂಡಬ್ಲೂ (BMW) ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಅವಘಡ ಸಂಭವಿಸಿತ್ತು. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Last Updated : Sep 25, 2023, 12:27 PM IST

ABOUT THE AUTHOR

...view details