ಬೆಂಗಳೂರು: ಪ್ರಜ್ವಲ್ ರೇವಣ್ಣರ ಸಂಸದ ಸ್ಥಾನ ರದ್ದುಗೊಳಿಸುವಂತೆ ಕೋರಿ ಹಾಸನ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎ.ಮಂಜು ಚುನಾವಣಾ ತಕಾರರು ಅರ್ಜಿಯನ್ನ ಹೈಕೋರ್ಟ್ಗೆ ಸಲ್ಲಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ರದ್ದು ಕೋರಿ ಹೈಕೋರ್ಟ್ಗೆ ಎ.ಮಂಜು ಅರ್ಜಿ
ಪ್ರಜ್ವಲ್ ರೇವಣ್ಣರ ಸಂಸದ ಸ್ಥಾನ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಎ.ಮಂಜು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ರದ್ದು ಕೋರಿ ಹೈಕೋರ್ಟ್ಗೆ ಎ. ಮಂಜು ಅರ್ಜಿ
ಅರ್ಜಿಯಲ್ಲಿ ಹಾಸನದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಚುನಾವಣಾ ಆಯೋಗಕ್ಕೆ ದಾಖಲೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಾಗೆಯೇ ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ. ಜೊತೆಗೆ ಪ್ರಜ್ವಲ್, ದೇವೇಗೌಡರ ಜೊತೆಗಿನ ಸಾಲದ ವ್ಯವಹಾರ ಕೂಡ ಮುಚ್ಚಿಟ್ಟಿದ್ದಾರೆ. ಹಾಗಾಗಿ ಅವರ ಸದಸ್ಯತ್ವ ರದ್ದು ಮಾಡಿ ಅಂತ ಎ.ಮಂಜು ಅರ್ಜಿಯಲ್ಲಿ ನಮೂದಿಸಿದ್ದಾರೆ.