ಕರ್ನಾಟಕ

karnataka

ETV Bharat / state

ನೀರಿನ ವಿಚಾರಕ್ಕೆ ಅಕ್ಕಪಕ್ಕದವರು ಗಲಾಟೆ ಮಾಡಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ - ಮನನೊಂದ ಗೃಹಿಣಿ ಆತ್ಮಹತ್ಯೆ

ನೀರು ತುಂಬವ ವಿಚಾರಕ್ಕೆ ನಡೆದ ಗಲಾಟೆ ವೇಳೆ ಅಕ್ಕಪಕ್ಕದ ಮನೆಯವರು ಹಲ್ಲೆ ಮಾಡಿದ್ದರೆ ಎಂದು ನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೃಹಿಣಿ ಆತ್ಮಹತ್ಯೆ
ಗೃಹಿಣಿ ಆತ್ಮಹತ್ಯೆ

By

Published : Apr 26, 2023, 1:30 PM IST

ಬೆಂಗಳೂರು: ನೀರು ತುಂಬುವ ವಿಚಾರಕ್ಕೆ ಆರಂಭವಾದ ಗಲಾಟೆ ಗೃಹಿಣಿಯೊಬ್ಬರ ಸಾವಿಗೆ ಕಾರಣವಾದ ಘಟನೆ ಏಪ್ರಿಲ್ 21ರಂದು ಯಲಹಂಕ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯರಸ್ತೆಯ ಸರ್ಕಾರಿ ವಸತಿ ಸಮುಚ್ಚಯದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿ, ಹಲ್ಲೆ ಮಾಡಿದರು ಎಂದು ನೊಂದ ಸರಸ್ವತಿ (35) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಸ್ವತಿ ಹಾಗೂ ಆಕೆಯ ಪತಿ ಕೋಗಿಲು ಮುಖ್ಯರಸ್ತೆಯ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ವಸತಿ ಸಮುಚ್ಚಯದ ಮನೆಯಲ್ಲಿ ವಾಸವಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗಂಡ ನಾಗರಾಜ್ ಸಿನಿಮಾಗಳಲ್ಲಿ ಕ್ಯಾಮೆರಾ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದರು.

ನೆಲ ಮಹಡಿಯಲ್ಲಿ ವಾಸವಿದ್ದ ಶ್ರೀನಿವಾಸ್ ಹಾಗೂ ಭವಾನಿ ಎಂಬ ದಂಪತಿ ಪ್ರತ್ಯೇಕವಾಗಿ ನೀರಿನ ಟ್ಯಾಂಕ್ ತಂದಿಟ್ಟುಕೊಂಡು ಎಲ್ಲರಿಗಾಗಿ ಇರುವ ನೀರಿನ ಸಂಪ್ ನಿಂದ ಪ್ರತ್ಯೇಕವಾಗಿ ನೀರು ತುಂಬಿಸಿಕೊಳ್ಳುತ್ತಿದ್ದರಂತೆ. ಇದರಿಂದಾಗಿ ನೀರಿನ ಅಭಾವ ಉಂಟಾಗುತ್ತಿದೆ ಎಂದು ಸರಸ್ವತಿ ಪ್ರಶ್ನಿಸಿದಾಗ, ಮನ ಬಂದಂತೆ ಬೈದು, ಚಾರಿತ್ರ್ಯವಧೆ ಮಾಡಿದ್ದಾರೆ. ಇದೇ ವಿಚಾರವಾಗಿ ಕಳೆದ ಕೆಲ ದಿನಗಳಿಂದ ಎರಡೂ ಮನೆಯವರ ನಡುವೆ ಗಲಾಟೆಗಳಾಗಿದ್ದು, ಠಾಣೆಯ ಮೆಟ್ಟಿಲೇರಿದಾಗ ಪೊಲೀಸರು ಬುದ್ದಿವಾದ ಹೇಳಿ‌ ಕಳಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ಕೆಲಸದ ನಿಮಿತ್ತ ನಾಗರಾಜ್ ಧಾರವಾಡಕ್ಕೆ ಹೋದಾಗ ನೀರಿನ ವಿಚಾರವಾಗಿ ಗಲಾಟೆ ಆರಂಭವಾಗಿದೆ.

ಈ ವೇಳೆ ಶ್ರೀನಿವಾಸ್, ಅವರ ಪತ್ನಿ ಭವಾನಿ ಹಾಗೂ ಶಿಲ್ಪಾ ಎಂಬಾಕೆ ಸರಸ್ವತಿಗೆ ಮನಬಂದಂತೆ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇದರಿಂದ ಮನನೊಂದ ಸರಸ್ವತಿ ಗಂಡನಿಗೆ ಕರೆ ಮಾಡಿ 'ನನ್ನಿಂದ ಇನ್ನು ಸಹಿಸಲು ಸಾಧ್ಯವಿಲ್ಲ, ನೀನು ಬೇರೆ ಕಡೆ ಮನೆ ಮಾಡುತ್ತಿಲ್ಲ, ನಾನು ಸಾಯುತ್ತಿದ್ದೇನೆ' ಎಂದಿದ್ದಾರೆ. ಗಾಬರಿಗೊಂಡ ನಾಗರಾಜ್ ಪಕ್ಕದ ಮನೆಯವರಿಗೆ ಕರೆ ಮಾಡಿ ಕಳಿಸುವಷ್ಟರಲ್ಲಿ ಸರಸ್ವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಸಾವಿಗೆ ಕಾರಣವಾದ ಶ್ರೀನಿವಾಸ್, ಭವಾನಿ ಹಾಗೂ ಶಿಲ್ಪಾಳ ವಿರುದ್ಧ ನಾಗರಾಜ್ ಯಲಹಂಕ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲೈವ್​ ವಿಡಿಯೋ ಮಾಡಿಟ್ಟು ವಿವಾಹಿತ ಮಹಿಳೆ ಆತ್ಮಹತ್ಯೆ

ವಿಜಯಪುರದಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ನವ ವಿವಾಹಿತೆ ಮಹಿಳೆಯೊಬ್ಬರು ಲೈವ್​ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಏಪ್ರಿಲ್ 15ರಂದು ಸುಹಾನ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಆತ್ಮಹತ್ಯೆಗೂ ಮುನ್ನ ಮಾಡಿದ್ದ ಲೈವ್​ ವಿಡಿಯೋದಲ್ಲಿ ಪ್ರಿಯಕರ ಅಲ್ತಾಫ್ ಸಿಲೆಮಾನ್ ​ಬ್ಲ್ಯಾಕ್ಮೇಲ್​ ಮಾಡುತ್ತಿದ್ದು, ತನ್ನೊಂದಿಗಿರುವ ನನ್ನ (ಸುಹಾನ) ಫೋಟೋವನ್ನು ಗಂಡನಿಗೆ ತೋರಿಸುತ್ತೇನೆ ಎಂದು ಬೆದರಿಕೆವೊಡ್ಡುತ್ತಿದ್ದ ಎಂದು ತಿಳಿಸಿದ್ದರು. ವಿಡಿಯೋದಲ್ಲಿ ಅಲ್ತಾಫ್​ನೊಂದಿಗೆ ಇನ್ನೂಸ್ ಹಾಗೂ ದಸ್ತಗಿರಸಾಬ್​ ಮುಳವಾಡ ಎಂಬುವವರ ಹೆಸರನ್ನು ಸುಹಾನ ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ:ಸೈನಿ ಸಮಾಜ ಮೀಸಲಾತಿ ಹೋರಾಟ: ಪ್ರತಿಭಟನಾನಿರತ ಯುವಕ ಆತ್ಮಹತ್ಯೆ

ಇದನ್ನೂ ಓದಿ:ಪಿಯುಸಿಯಲ್ಲಿ ಫೇಲ್‌: ವಿದ್ಯಾರ್ಥಿನಿ ಆತ್ಮಹತ್ಯೆ .

ABOUT THE AUTHOR

...view details