ಬೆಂಗಳೂರು: ಕಾಂಗ್ರೆಸ್ನ ನೂತನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅತ್ಯಂತ ಮಹತ್ವದ ವಿಷಯಗಳನ್ನು ಜನರ ಮುಂದಿಡಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಸುರ್ಜೇವಾಲ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸುದ್ದಿಗೋಷ್ಠಿ: ಪ್ರಮುಖ ವಿಷಯಗಳ ಬಗ್ಗೆ ಪ್ರಸ್ತಾಪ - ಕಾಂಗ್ರೆಸ್ ಸುದ್ದಿಗೋಷ್ಟಿ
ನಿನ್ನೆ ರಾತ್ರಿ ಕಾಂಗ್ರೆಸ್ನ ನೂತನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 11ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸೇರಿದಂತೆ ಹಿರಿಯ ನಾಯಕರ ಜೊತೆ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಅತ್ಯಂತ ಮಹತ್ವದ ವಿಷಯಗಳನ್ನು ಜನರ ಮುಂದಿಡಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ತಿಳಿಸಿದರು.
ನಿನ್ನೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್.ಉಗ್ರಪ್ಪ, ಪಕ್ಷದ ನೂತನ ರಾಜ್ಯ ಉಸ್ತುವಾರಿ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 11ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸೇರಿದಂತೆ ಹಿರಿಯ ನಾಯಕರ ಜೊತೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದರು.
ಈ ಸರ್ಕಾರ ನಿರ್ಜೀವವಾಗಿದ್ದು, ಅನೇಕ ಪ್ರಕರಣಗಳಿಗೆ ಕಾರಣವಾಗಿದೆ. ಕೋವಿಡ್ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಜನರ ಬದುಕು ದುಸ್ತರವಾಗಿದೆ. ನೆರೆ ಹಾವಳಿ ಸಮಸ್ಯೆ ಎದುರಾಗಿದೆ. ಕಳೆದ ವರ್ಷದ ಅತಿವೃಷ್ಟಿ ನಷ್ಟವೇ ಕೊಟ್ಟಿಲ್ಲ, ಇನ್ನು ಈಗ ಎಲ್ಲಿ ಕೊಡುತ್ತಾರೆ? ರಾಜ್ಯದ ಆರ್ಥಿಕ ಸ್ಥಿತಿ ಕೆಟ್ಟಿದೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಈ ವಿಚಾರಗಳ ಹಿನ್ನೆಲೆಯಲ್ಲಿ ಎಲ್ಲಾ ನಾಯಕರು ಅತ್ಯಂತ ಮಹತ್ವದ ವಿಷಯವನ್ನು ಜನರ ಮುಂದಿಡಲಿದ್ದಾರೆ ಎಂದರು.