ಬೆಂಗಳೂರು:ನಗರದಲ್ಲಿ ಕೇಂಗೇರಿ ರಸ್ತೆ ಹಾಗೂ ಪಾಲಿಕೆ ಕೇಂದ್ರ ಕಚೇರಿ ಬಳಿ ರಸ್ತೆಗೆ ಇತ್ತೀಚೆಗೆ ಅಗಲಿದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರು ನಾಮಕರಣ ಮಾಡಲಾಗಿದೆ ಎಂಬ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದು ನಕಲಿ ಫೋಟೋ ಎಂದು ಸಾಬೀತಾಗಿದೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ಹೆಸರಿನ ರಸ್ತೆ ನಾಮಫಲಕ ಫೋಟೋ ನಕಲಿ - ನಕಲಿ ಫೋಟೋ
ರಸ್ತೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ನಕಲಿ ಫೋಟೋ
ಎಸ್ಪಿಬಿ ಅವರ ಹೆಸರನ್ನು ಪ್ರಮುಖ ರಸ್ತೆಗೆ ಇಡಬೇಕೆಂಬ ಬೇಡಿಕೆ ಕೇಳಿಬಂದಿತ್ತು. ಆದರೆ ಈ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್, ಇದು ನಕಲಿ ಚಿತ್ರವಾಗಿದ್ದು, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.
Last Updated : Oct 7, 2020, 8:09 AM IST