ಬೆಂಗಳೂರು:ಕೊರೊನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಕುರಿತು ರಾಜ್ಯಪಾಲ ವಜುಭಾಯ್ ವಾಲಾ ಅಧ್ಯಕ್ಷತೆಯಲ್ಲಿ ಮಹತ್ವದ ಸರ್ವಪಕ್ಷ ಸಭೆ ಆರಂಭಗೊಂಡಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯ ಅಧ್ಯಕ್ಷತೆಯನ್ನು ರಾಜಭವನದಿಂದ ರಾಜ್ಯಪಾಲ ವಜುಭಾಯ್ ವಾಲಾ ವಹಿಸಿದ್ದು, ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಹೆಚ್. ಡಿ ಕುಮಾರಸ್ವಾಮಿ, ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಡಿಯೋ ಸಂವಾದದಲ್ಲಿ ಮೂಲಕ ಭಾಗಿಯಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯಪಾಲರಿಗೆ ಮಾಹಿತಿ ನೀಡುತ್ತಿದ್ದಾರೆ. ತಜ್ಞರ ವರದಿ, ಶಿಫಾರಸುಗಳನ್ನು ಸಚಿವರು ವಿವರಿಸಲಿದ್ದು, ಪ್ರತಿಪಕ್ಷ ನಾಯಕರಿಂದಲೂ ರಾಜ್ಯಪಾಲರು ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ನಂತರ ಟಫ್ ರೂಲ್ಸ್ ಕುರಿತು ಒಂದು ನಿರ್ಧಾರಕ್ಕೆ ಬದಲಾಗುತ್ತದೆ ಎನ್ನಲಾಗಿದೆ.