ನೆಲಮಂಗಲ: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯ ಕುತ್ತಿಗೆ ಮೇಲೆ ಕುಡುಗೋಲಿನಿಂದ ಗಂಭೀರ ಗಾಯವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಬರಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು - ನೆಲಮಂಗಲದಲ್ಲಿ ಅನುಮಾನಸ್ಪದ ವ್ಯಕ್ತಿ ಸಾವು
ಬೆಂಗಳೂರಿನ ನೆಲಮಂಗಲದಲ್ಲಿ ಕುಡಗೋಲಿನಿಂದ ಹಲ್ಲೆಯಾಗಿ ಲೋಕೇಶ್ ಎಂಬುವವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಲೋಕೇಶ್
ಮೃತನನ್ನು ಚಿಕ್ಕಮಗಳೂರು ಜಿಲ್ಲೆ ಕಡೂರಿನ ಅಂದೇನಹಳ್ಳಿ ಮೂಲದ ಲೋಕೇಶ್(34) ಎಂದು ಗುರುತಿಸಲಾಗಿದ್ದು, ವಾರದ ಹಿಂದೆ ಸಂಬಂಧಿಕರ ಮನೆಗೆ ತೆರಳಿದ್ದ ಎನ್ನಲಾಗಿದೆ.
ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ತನಿಖೆಯಾಗಬೇಕಿದೆ.