ನೆಲಮಂಗಲ:ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಬೊಮ್ಮನಹಳ್ಳಿ ಬಳಿ ನಡೆದಿದೆ.
ಸಾರಿಗೆ ಬಸ್ - ಲಾರಿ ನಡುವೆ ಭೀಕರ ಅಪಘಾತ: 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ನೆಲಮಂಗಲ ಅಪಘಾತ ಸುದ್ದಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಬೊಮ್ಮನಹಳ್ಳಿ ಬಳಿ ನಡೆದಿದೆ.
ಅಪಘಾತ
ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಕಡೆ ಬರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಈ ಪ್ರಕರಣ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.