ಬೆಂಗಳೂರು:ರಾಜರಾಜೇಶ್ವರಿನಗರದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು ಅನುಮಾನಾಸ್ಪದವಾಗಿ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿ.
ಶ್ರೀನಿವಾಸ್ 5.30 ಲಕ್ಷ ಮೌಲ್ಯದ 105 ಗ್ರಾಂ ತೂಕದ ಚಿನ್ನಾಭರಣದ ಜೊತೆಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಈ ವೇಳೆ ಸ್ವಯಂ ದೂರು ದಾಖಲಿಸಿ, ಸಮೀಪದ ಶಕ್ತಿ ರೆಸಾರ್ಟ್ ಬಳಿ ವಾಹನ ತಪಾಸಣೆ ನಡೆಸಿದ ವೇಳೆ ಸಿಕ್ಕಿಬಿದ್ದಿದ್ದಾನೆ.