ಕರ್ನಾಟಕ

karnataka

ETV Bharat / state

ಮನೆ ಮುಂದೆ ಹಾದು ಹೋಗಿದ್ದ ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು

ತಮ್ಮ ಮನೆಯನ್ನು ಸ್ವಚ್ಛಗೊಳಿಸುವಾಗ ಕೈಯಲ್ಲಿ ಹಿಡಿದಿದ್ದ ಕಬ್ಬಿಣದ ಪೈಪ್ ಮನೆಯ ಮುಂಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಾಗಿದೆ. ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮಹಿಳೆ ಕೆಳಗೆ ಬಿದ್ದಿದ್ದಾರೆ.

ಮನೆ ಮುಂದೆ ಹಾದು ಹೋಗಿದ್ದ ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು

By

Published : Aug 3, 2019, 11:44 PM IST

ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಇಂದು ಶ್ರಾವಣ ಮಾಸದ ಮೊದಲ ಶನಿವಾರವಾದ ಕಾರಣ ಮನೆಯನ್ನು ಸ್ವಚ್ಛಗೊಳಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಆರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಿಯಾಂಕ್‌ನಗರದಲ್ಲಿ ನಡೆದಿದೆ.

ಗಾಯಿತ್ರಿ(26) ಮೃತ ಮಹಿಳೆ. ಇವರು ಬೆಳಗಿನ ಜಾವ ತಮ್ಮ ಮನೆಯನ್ನು ಸ್ವಚ್ಛಗೊಳಿಸುವಾಗ ಕೈಯಲ್ಲಿ ಹಿಡಿದಿದ್ದ ಕಬ್ಬಿಣದ ಪೈಪ್ ಮನೆಯ ಮುಂಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಾಗಿದೆ. ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮಹಿಳೆ ಕೆಳಗೆ ಬಿದ್ದಿದ್ದಾರೆ.

ಮನೆ ಮುಂದೆ ಹಾದು ಹೋಗಿದ್ದ ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು

ಕೂಡಲೆ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕಳೆದೊಂದು ತಿಂಗಳ ಅವಧಿಯಲ್ಲಿ ಬಸವನಪುರ ವಾರ್ಡ್​ನಲ್ಲಿ ನಡೆದ ಎರಡನೆ ದುರಂತ ಇದಾಗಿದ್ದು, ಇದಕ್ಕೆ ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣವೆಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details