ದೇವನಹಳ್ಳಿ :ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಫ್ಲೈಟ್ ನಂಬರ್ 6E122 ವಿಮಾನದಲ್ಲಿ ಗಂಡು ಮಗುವಿನ ಜನನವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 7-40ಕ್ಕೆ ಲ್ಯಾಂಡ್ ಆಗಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.